ವ್ಯಕ್ತಿ ಕೊಲೆ: ನಾಲ್ವರಿಗೆ ಕಠಿಣ ಜೀವಾವಧಿ ಶಿಕ್ಷೆ

Murder: The convict was sentenced to life imprisonment

06-06-2018

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಬಡಿಗೆಯಿಂದ ಹೊಡೆದು ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ದೊಡ್ಡಮಳ್ಳೂರು ಗ್ರಾಮದ ಕುಮಾರ್, ರಾಮು, ತೀರ್ಥ, ಹಾಗೂ ಮರಿಸ್ವಾಮಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ, 2016ರ ಫೆಬ್ರವರಿ 15 ರಂದು ಚನ್ನಪಟ್ಟಣ ತಾಲ್ಲೂಕಿನ ದೊಡ್ಡ ಮಳ್ಳೂರು ಗ್ರಾಮದಲ್ಲಿ ಕಲ್ಲಾಪುರ ಗ್ರಾಮದ ರವಿ ಎಂಬ ವ್ಯಕ್ತಿಯ ಮೇಲೆ ನಾಲ್ವರು ಆರೋಪಿಗಳು ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದ್ದರು.

ಘಟನೆ ಸಂಬಂಧ ನಾಲ್ವರನ್ನ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಕೊಲೆ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ತಲಾ 50ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾದವರ ಸಂಬಂಧಿಕರು ಕಣ್ಣೀರಿಟ್ಟರೆ, ಕೊಲೆಯಾದ ವ್ಯಕ್ತಿಯ ತಂದೆ ತಮ್ಮ ಮಗನ ಕೊಲೆಗೆ ಇದೀಗ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿದೆ ಎಂದು ಸಂತೋಷ ವ್ಯಕ್ತಪಡಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ