ವಿಧಾನಸಭಾ ಚುನಾವಣೆ 100 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ !

Kannada News

25-05-2017

ಬೆಂಗಳೂರು:- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರ ಹಿಡಿಯುವ ಉದ್ದೇಶ ಹೊಂದಿರುವ ಕಾಂಗ್ರೆಸ್, ಹೊಸ ಮುಖಗಳಿಗೆ ಮಣೆ ಹಾಕುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ ಶುರುವಾಗಿದೆ. ಸಮೀಕ್ಷೆ ಆಧರಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಈಗಾಗಲೇ ನಿರ್ಧರಿಸಿದ್ದು, ಇದರ ಪರಿಣಾಮ ಹಾಲಿ ಹಾಗೂ ಕಳೆದ ಚುನಾವಣೆಯಲ್ಲಿ ಸೋತು ಟಿಕೆಟ್ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳ ಮೇಲೂ ಆಗಲಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ ಕನಿಷ್ಠ 100 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಯೋಚಿಸುತ್ತಿದೆ. ಅದರಂತೆ ರಾಜ್ಯ ನಾಯಕರು ಕಾರ್ಯೋನ್ಮುಖರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಪಕ್ಷ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಿ 123ರಲ್ಲಿ ಗೆಲುವು ಸಾಧಿಸಿತ್ತು. ಮುಂದಿನ ವರ್ಷ ನಡೆಯುವ ಮಹಾ ಚುನಾವಣೆಯಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಕೆಲವೊಂದು ಬದಲಾವಣೆ ಅನಿವಾರ್ಯವೆಂಬುದು ವರಿಷ್ಠರು ಹಾಗೂ ರಾಜ್ಯ ನಾಯಕರಿಗೆ ಮನವರಿಕೆಯಾಗಿದೆ. ಆದ್ದರಿಂದಲೇ ಈಗ ನಡೆದಿರುವ ಸಮೀಕ್ಷೆ ಆಧರಿಸಿ ಮುಂದಿನ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಯೋಜನೆಯಲ್ಲಿದೆ. 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ