ಸರ್ಕಾರಿ ಶಾಲೆ: ಶಿಕ್ಷಕರ ಹೆಗಲಿಗೆ ಮತ್ತೊಂದು ಜವಾಬ್ದಾರಿ?

Government School: Another Responsibility for school Teachers?

06-06-2018

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ದಾಖಲಾತಿಯನ್ನು ಹೆಚ್ಚಿಸಲು ಮಕ್ಕಳನ್ನು ಶಾಲೆಗೆ ಕರೆತರುವ ಹೊಣೆಯನ್ನು ಶಿಕ್ಷಕರಿಗೆ ನೀಡಲು ಮುಂದಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಹಾಗೂ ಕಡಿಮೆ ದಾಖಲಾತಿಯಿದ್ದರೆ, ಅದಕ್ಕೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರೇ ಜವಾಬ್ದಾರರಾಗಿರುತ್ತಾರೆ, ಒಂದು ವೇಳೆ ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಶಿಕ್ಷಕರು ವಿಫಲರಾದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರದ ಮೂಲಕ ನಿರ್ದೇಶನ ನೀಡಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಶೂನ್ಯ ದಾಖಲಾತಿ ಹಾಗೂ ಕಡಿಮೆ ದಾಖಲಾತಿ ಇರುವ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೇ ಮಕ್ಕಳನ್ನು ದಾಖಲಿಸಲು ಮುಂದಾಗಬೇಕು ಎಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷ 261 ಪ್ರಾಥಮಿಕ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ. ಇಲ್ಲಿ ಒಟ್ಟು 229 ಶಿಕ್ಷಕರು ಕೆಲಸ ಮಾಡುತ್ತಿದ್ದು, ಪಾಠವೇ ಮಾಡದೇ ವೇತನ ಪಡೆಯುತ್ತಿದ್ದಾರೆ. ಇದೇ ರೀತಿ 57 ಪ್ರೌಢ ಶಾಲೆಗಳಲ್ಲಿ 137 ಶಿಕ್ಷಕರು ಕೆಲಸವೇ ಮಾಡದೆ ವೇತ ಪಡೆಯುತ್ತಿದ್ದಾರೆ. 50 ಮಕ್ಕಳಿಗಿಂತ ಕಡಿಮೆ ದಾಖಲಾತಿ ಇದ್ದರೆ, ಅದನ್ನು ಹೆಚ್ಚುವರಿ ಜವಾಬ್ದಾರಿ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರದ್ದಾಗಿರುತ್ತದೆ. ಶೂನ್ಯ ದಾಖಲಾತಿ ಇರುವ ಪ್ರಾಥಮಿಕ ಶಾಲೆಗಳು 25 ಹಾಗೂ ಪ್ರೌಢ ಶಾಲಾ ಶಿಕ್ಷಕರು 50 ಮಕ್ಕಳನ್ನು ಶಾಲೆಗೆ ಸೇರಿಸಿದಿದ್ದರೆ, ಸಿಇಒ ಅಲ್ಲಿನ ಶಿಕ್ಷಕರನ್ನು ಬೇರೆ ಶಾಲೆಗೆ ಮರು ನಿಯೋಜನೆ ಮಾಡಬೇಕೆಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.


ಸಂಬಂಧಿತ ಟ್ಯಾಗ್ಗಳು

Attendance government school ಜವಾಬ್ದಾರಿ ಶಿಕ್ಷಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ