ಮೈಸೂರಲ್ಲಿ ‘ಕಾಲಾ’ ವಿರುದ್ಧ ಒಗ್ಗಟ್ಟು ಪ್ರದರ್ಶನ!07-06-2018

ಮೈಸೂರು: ಕಾವೇರಿ ನದಿ ನೀರು ಹಂಚಿಕೆ ಕುರಿತು ನಟ ರಜನಿಕಾಂತ್ ವಿವಾದಾತ್ಮಕ ಹೇಳಿಕೆ ಹಿನ್ನೆಲೆ, ಮೈಸೂರಲ್ಲೂ ಕಾಲಾ ಚಿತ್ರ ಬಿಡುಗಡೆಗೆಯಾಗಿಲ್ಲ. ಶೋ ಬುಕ್ ಮಾಡದ ಮಲ್ಟಿಪ್ಲೆಕ್ಸ್, ಚಲನಚಿತ್ರ ಮಂದಿರಗಳ ಮಾಲೀಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಪ್ರದರ್ಶನ‌ ಬುಕ್ ಮಾಡದೆ ಪ್ರತಿಭಟಿಸಿದ್ದಾರೆ. ಒಂದು ವೇಳೆ ಪ್ರದರ್ಶನಕ್ಕೆ ಮುಂದಾದರೂ ಭದ್ರತಾ ಸಮಸ್ಯೆ ಉಂಟಾಗಬಹುದು. ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂಬ ಮುನ್ಸೂಚನೆ ಅರಿತು ಸ್ವಯಂ ಪ್ರೇರಣೆಯಿಂದ ಪ್ರದರ್ಶನಕ್ಕೆ ಮುಂದಾಗಿಲ್ಲ ಎಂದು ತಿಳಿದು ಬಂದಿದೆ. ಮೈಸೂರಿನ ಡಿ.ಆರ್.ಸಿ, ಐನಾಕ್ಸ್ ಮತ್ತು ಕೆಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಯಬೇಕಿತ್ತು.


ಸಂಬಂಧಿತ ಟ್ಯಾಗ್ಗಳು

Kaala Movie ಕಾವೇರಿ ನದಿ ರಜನಿಕಾಂತ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ