ಅಪ್ರಾಪ್ತೆ ಮೇಲೆ ಅತ್ಯಾಚಾರ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Rape on a minor girl at Hukeri

07-06-2018

ಬೆಳಗಾವಿ: ಮದುವೆಯಾಗುವದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿಯ ಹುಕ್ಕೇರಿಯಲ್ಲಿ ನಡೆದಿದೆ. ಮೇ 1ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಮೇ 1ರಂದು ಹುಕ್ಕೇರಿಯಿಂದ ಪುಸಲಾಯಿಸಿ ಮಹಾರಾಷ್ಟ್ರದ ಸಾವಳಗಜ್ ಎಂಬ ಗ್ರಾಮಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯ ಎಸಗಿದ ಶಂಕರ ಶಿವಪ್ಪ ಮಾಳಗೆ ಎಂಬಾತನನ್ನು ಹುಕ್ಕೇರಿ ಪೊಲೀಸರು ಬಂಧಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ.

ಮೇ 1ರಂದು ಬಾಲಕಿ ಸ್ವಾಗ್ರಾಮದಿಂದ ಕಾಣೆಯಾದ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದರು. ಇದೀಗ ಬಾಲಕಿಯನ್ನು ರಕ್ಷಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಲಾಗಿದೆ. ಆರೋಪಿ ವಿರುದ್ಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಹಾಗೂ ಐಪಿಸಿ ಸೆಕ್ಷನ್ 376 ಅಡಿ ಪ್ರಕರಣ ದಾಖಲಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Rape Minior ಮಹಾರಾಷ್ಟ್ರ ಬಾಲಕಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ