ಪಕ್ಷದಲ್ಲಿ ನನಗೆ ಯಾವುದೇ ರೀತಿಯ ಬೆಲೆ ಇಲ್ಲ !

Kannada News

25-05-2017

ಮೈಸೂರು:- ಪಕ್ಷದಲ್ಲಿ ನನಗೆ ಯಾವುದೇ ರೀತಿಯ ಬೆಲೆ ಇಲ್ಲ. ಪಕ್ಷದ ನಾಯಕರ ನಡೆಯಿಂದ ತೀವ್ರ ನೋವುಂಟಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು. ಮಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನನಗೆ ಯಾವುದೇ ರೀತಿಯ ಬೆಲೆ ಇಲ್ಲ. ಕುಮಾರಸ್ವಾಮಿ ಹಾಗೂ ಸಾ.ರಾ.ಮಹೇಶ್ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಳ್ಳುತ್ತಿದ್ಧಾರೆ. ಮೇಯರ್ ಹಾಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವೂ ನನಗಿಲ್ಲದಂತಾಗಿದೆ. ಅಲ್ಲದೆ ದೇವೇಗೌಡರು ಮೈಸೂರಿಗೆ ಬಂದಿದ್ದ ವೇಳೆ ನನ್ನನ್ನು ಭೇಟಿ ಮಾಡಿಲ್ಲ ಎಂದರು. ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಯಷ್ಟೆ. ನಾನು ಯಾವ ಪಕ್ಷಕ್ಕೂ ಹೋಗುವುದಿಲ್ಲ. ಹುಣಸೂರು, ಕೆ.ಆರ್.ನಗರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂಬುದು ಶುದ್ಧ ಸುಳ್ಳು. ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಯಾವ ಕ್ಷೇತ್ರದಲ್ಲೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ