ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಿಲ್ಲ: ಸಿದ್ದರಾಮಯ್ಯ07-06-2018

ಬಾಗಲಕೋಟೆ: ‘ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಿಲ್ಲ, ನಾನೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ. ನನ್ನನ್ನು ಕಡೆಗಣಿಸಿದ್ದಾರೆ ಅಂತ ಯಾರು ಹೇಳಿದರು'? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಾಗಲಕೋಟೆಯ ಬಾದಾಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರ ರಚನೆ ವೇಳೆ ನನ್ನ ಸಲಹೆ ಪಡೆಯಲಾಗಿದೆ. ನನ್ನ ಆಪ್ತರು,ಪರಮಾಪ್ತರು ಯಾರನ್ನೂ ಮೂಲೆಗುಂಪು ಮಾಡಿಲ್ಲ. ಸಚಿವ ಸ್ಥಾನ ಸಿಕ್ಕವರು, ಸಿಗದೆ ಇರುವವರು ಎಲ್ಲರೂ ನನ್ನ ಆಪ್ತರು,ಪರಮಾಪ್ತರು’ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗಳು ಸಾಮಾನ್ಯ. ಸಾಮಾಜಿಕ ನ್ಯಾಯದಡಿ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿದೆ. ಇನ್ನೂ ಆರು ಸಚಿವ ಸ್ಥಾನ ಬಾಕಿ ಇವೆ, ಅವುಗಳನ್ನು ಸಾಮಾಜಿಕ ನ್ಯಾಯದಡಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು. ‘ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುತ್ತೇನೆ ಎಂದು ಯಾರು ಹೇಳಿದರು? ಇದೆಲ್ಲ ಸುಳ್ಳು, ಮಾಧ್ಯಮಗಳ ಸೃಷ್ಟಿ’ ಎಂದರು.

ಬಾದಾಮಿಯಲ್ಲಿ ನಾನು ಗೆಲ್ಲಲು ಶ್ರಮಿಸಿದ್ದ  ಜನರಿಗೆ ಧನ್ಯವಾದ ಹೇಳಲು ಬಂದಿದ್ದೇನೆ. ಬಾದಾಮಿ ಒಂದು ಪ್ರವಾಸಿ ತಾಣ ಇದನ್ನು ಹೆಚ್ಚು ಅಭಿವೃದ್ಧಿ ಮಾಡೋದು ನನ್ನ ಕನಸು ಎಂದರು.


ಸಂಬಂಧಿತ ಟ್ಯಾಗ್ಗಳು

Siddaramaiah coalition government ಸಲಹೆ ಪರಮಾಪ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ