ಅತೃಪ್ತ ಕೈ ಶಾಸಕರಿಗೆ ಹೈಕಮಾಂಡ್ ಎಚ್ಚರಿಕೆ!

Congress High Command warned congress MLAs of karnataka!

08-06-2018

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕೈ ನಾಯಕರಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಬಂಡಾಯದ ಭೀತಿ ಎದುರಾಗಿದೆ. ನಿನ್ನೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಕಾಂಗ್ರೆಸ್ ಅತೃಪ್ತ ಶಾಸಕರು ಸಾಕಷ್ಟು ಸಭೆಗಳನ್ನು ನಡೆಸಿದ್ದರು. ಇಂದು ಕೂಡಾ ಸಭೆ ನಡೆಸಲಿದ್ದು, ಸಭೆಯಲ್ಲಿ ತಮ್ಮ ಮುಂದಿನ ನಡೆ ಬಗ್ಗೆ ಚರ್ಚಿಸಲಿದ್ದಾರೆ. ಸಾಕಷ್ಟು ಮಹತ್ವದ ಬೆಳವಣಿಗೆಗಳಾಗಲಿವೆ ಎಂದು ಹೇಳಲಾಗುತ್ತಿದೆ.

ಇದರ ಬೆನ್ನಲ್ಲೇ ಅತೃಪ್ತ ಶಾಸಕರಿಗೆ ತಾಳ್ಮೆಯ ಪಾಠ ಹೇಳುತ್ತಿರುವ ಕಾಂಗ್ರೆಸ್ ಹೈ ಕಮಾಂಡ್, ಭಿನ್ನಮತ ಹೊರಹಾಕಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಶಾಸಕ ಎಂ.ಬಿ ಪಾಟೀಲ್, ಹೆಚ್.ಕೆ ಪಾಟೀಲ್ ನಿವಾಸದಲ್ಲಿ ನಡೆಯುತ್ತಿರುವ ಸಭೆಗಳ ಮೇಲೆ ಡಿಸಿಎಂ ನಿಗಾ ವಹಿಸಿದ್ದಾರೆ ಎನ್ನಲಾಗಿದೆ. ಅತೃಪ್ತ ಶಾಸಕರ ಪ್ರತಿಹಂತದ ಸಭೆ ಮಾಹಿತಿಯನ್ನು ಡಿಸಿಎಂ ಜಿ‌.ಪರಮೇಶ್ವರ್ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

congress MLA's ಭಿನ್ನಮತ ಎಚ್ಚರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ