ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ !

Kannada News

25-05-2017

ನವದೆಹಲಿ:- ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆದರೆ ನಮ್ಮದೇನೂ ಅಭ್ಯಂತರವಿಲ್ಲ. ನಾವು ಚುನಾವಣೆಗೆ ಸಿದ್ದರಿದ್ದೇವೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಸಮೀಕ್ಷೆ ನಡೆಸುತ್ತಿವೆ. ಆದರೆ ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ನಾಳೆ ಎಲ್ಲಾ ಪ್ರಾದೇಶಿಕ ಪಕ್ಷಗಳ ಸಭೆ ಕರೆದಿದ್ದು, ಸಭೆಗೆ ನಮ್ಮ ಪಕ್ಷದ ಸಂಸದರಾದ ಸಿ.ಎಸ್.ಪುಟ್ಟರಾಜು ಪಾಲ್ಗೊಳ್ಳಲಿದ್ದಾರೆ ಎಂದರು.
 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ