ನಟ ದುನಿಯಾ ವಿಜಯ್ ಬಂಧನ

Actor duniya vijay arrested

08-06-2018

ಬೆಂಗಳೂರು: ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ನಡೆದ ಖಳನಟರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಅತ್ತಿಬೆಲೆ‌ ಸಮೀಪದ ರೆಸಾರ್ಟ್‌ ಒಂದರಲ್ಲಿ ಉಳಿದುಕೊಂಡಿದ್ದ ದುನಿಯಾ ವಿಜಯ್‍ನನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ.

ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಪ್ರಕರಣ ದಾಖಲಾಗಿತ್ತು. ಮಾಸ್ತಿಗುಡಿ ಚಿತ್ರೀಕರಣದ ವೇಳೆ ನಟರಾದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣ ಸಂಬಂಧ ನಿರ್ದೇಶಕನ ಮೇಲೆ ರಾಮನಗರ ಜೆಎಂಎಫ್ಸಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು.

ಕೋರ್ಟ್ ತೀರ್ಪಿನಂತೆ ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ನಿರ್ದೇಶಕ ಸುಂದರ್ ಪಿ.ಗೌಡ ಅವರನ್ನು ಬಂಧಿಸಲು ಸುಂದರ್ ಮನೆಗೆ ತಡರಾತ್ರಿ ಹೋಗಿದ್ದರು. ಸುಂದರ್ ಮನೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದೆ. ಈ ವೇಳೆ ದುನಿಯಾ ವಿಜಯ್ ಸುಂದರ್ ಬಂಧಿಸದಂತೆ ಪೊಲೀಸರನ್ನ ತಡೆದಿದ್ದರು. ಇದೇ ಸಂದರ್ಭದಲ್ಲಿ ಸುಂದರ್ ಗೌಡ ಹಿಂಬಾಗಿಲಿನಿಂದ ಪರಾರಿಯಾಗಿದ್ದರು.

ಸುಂದರ್.ಪಿ ಗೌಡ ತಾಯಿ ಆರೋಗ್ಯದ ಸಮಸ್ಯೆ ಹಿನ್ನೆಲೆ ತಾವೇ ನಾಳೆ ಕರೆತರುವುದಾಗಿ ದುನಿಯಾ ವಿಜಯ್ ಮಧ್ಯಸ್ಥಿಕೆ ವಹಿಸಿದ್ದರು. ಅಷ್ಟೇ ಅಲ್ಲದೆ ದುನಿಯಾ ವಿಜಯ್ ತಾವೇ ಸ್ವತಃ ಸುಂದರ್ ನನ್ನ ಠಾಣೆಗೆ ಕರೆತರುವುದಾಗಿ ಪೊಲೀಸರ ಮನವೊಲಿಸುವ ಪ್ರಯತ್ನ ಮಾಡಿದ್ದರು. ಈ ಬಗ್ಗೆ ತಾವರೆಕೆರೆ ಹೆಡ್ ಕಾನ್ಸ್ ಟೇಬಲ್ ಗೋವಿಂದರಾಜು ದೂರು ನೀಡಿದ್ದು, ಪ್ರಕರಣ ದಾಖಲಿಸಿದ್ದ ಪೊಲೀಸರು ರೆಸಾರ್ಟ್‍ವೊಂದರಲ್ಲಿ ಅಡಗಿ ಕುಳಿತಿದ್ದ ದುನಿಯಾ ವಿಜಿಯ್‍ನನ್ನು ಬಂಧಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Duniya Vijay Actor ರೆಸಾರ್ಟ್‍ ಖಳನಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ