ಕೆಪಿಸಿಸಿ:ಶಾಸಕ ಹ್ಯಾರಿಸ್ ಬೆಂಬಲಿಗನೊಬ್ಬನ ಹೈಡ್ರಾಮ!

Harris followers high drama in front of KPCC office!

08-06-2018

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಶಾಸಕರುಗಳ ಬೆಂಬಲಿಗರ ಪ್ರತಿಭಟನೆ ತೀವ್ರಗೊಂಡಿದ್ದು ನಗರದ ಕೆಪಿಸಿಸಿ ಕಚೇರಿ ಮುಂಭಾಗದ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್‍ಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಶಾಸಕ ಹ್ಯಾರಿಸ್‍ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಬಲಿಗರು ಇಂದು ಬೆಳಗ್ಗೆಯಿಂದ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಹ್ಯಾರಿಸ್ ಬೆಂಬಲಿಗ ಸಲೀಂ ಎಂಬಾತ ಕಟೌಟ್ ಕಟ್ಟಲು ನಿಲ್ಲಿಸಿದ್ದ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಧಾವಿಸಿ ಸಲೀಂನನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರು ಕಚೇರಿ ಒಳಗೆ ತೆರಳದಂತೆ ಅಡ್ಡಲಾಗಿ ಕುಳಿತು ಧರಣಿ ನಡೆಸಿದರು ಮುಂಜಾಗ್ರತಾ ಕ್ರಮವಾಗಿ ಸಿಬ್ಬಂದಿ ಕಚೇರಿಯ ಬಾಗಿಲು ಹಾಕಿಕೊಂಡು ಕೆಲಸ ಮಾಡಿದರು, ಕಾಂಗ್ರೆಸ್ ಕಚೇರಿಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಹ್ಯಾರಿಸ್ ಬೆಂಬಲಿಗನೊಬ್ಬ ಕೆಪಿಸಿಸಿ ಕಚೇರಿ ಬಳಿ ಇರುವ ಹೋರ್ಡಿಂಗ್ ಮೇಲೆ ಏರಿ ಪ್ರತಿಭಟನೆ ನಡೆಸಿದ. ಜೊತೆಗೆ ಬೆಂಬಲಿಗನೊಬ್ಬ ತಲೆ ಬೋಳಿಸಿಕೊಳ್ಳವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇದಲ್ಲದೇ ರಸ್ತೆ ತಡೆ ನಡೆಸಿದ ಬೆಂಬಲಿಗರನ್ನು ತಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


ಸಂಬಂಧಿತ ಟ್ಯಾಗ್ಗಳು

NA Haris Protest ಸಿಬ್ಬಂದಿ ಕೆಪಿಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ