ಭಾರೀ ಮಳೆ: ರೈಲ್ವೇ ಅಂಡರ್ ಪಾಸ್ ಜಲಾವೃತ

Heavy Rain at chikkamagaluru

08-06-2018

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಹಾಗು ಇಂದು ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ರೈಲ್ವೇ ಅಂಡರ್ ಪಾಸ್ ಜಲಾವೃತವಾಗಿದೆ. ಇದರಿಂದ 15ಕ್ಕೂ ಹೆಚ್ಚು ಗ್ರಾಮಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ. ರಸ್ತೆ ಸಂಪರ್ಕವಿಲ್ಲದೆ ನೂರಾರು ಗ್ರಾಮಸ್ಥರು ಪರದಾಡುವಂತಾಗಿದೆ. ತಾಳ್ಮೆಯ ಕಟ್ಟೆಯೊಡೆದಿದ್ದ ಗ್ರಾಮಸ್ಥರು ಜಿಲ್ಲಾಡಳಿತ, ರೈಲ್ವೇ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ ಮಾಡಿರುವುದೇ ಇಷ್ಟಕ್ಕೆಲ್ಲಾ ಕಾರಣ ಎಂದು ದೂರಿದ ಗ್ರಾಮಸ್ಥರು, ಪ್ರತಿಭಟನೆ ನಡೆಸಿದ್ದಾರೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಅಂಡರ್ ಪಾಸ್ ಸಂಪೂರ್ಣ ಜಲವೃತವಾಗಿದೆ. ದೇವನೂರು, ದೇವರಕಾರೆಹಳ್ಳಿ, ಮಾಚಗೊಂಡನಹಳ್ಳಿ, ಸಖರಾಯಪಟ್ಟಣ ಗ್ರಾಮಸ್ಥರು ಒಟ್ಟಾಗಿ ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆಗಿಳಿದಿದ್ದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ‌ರೈಲ್ವೇ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ  ರೈಲ್ವೇ ಅಧಿಕಾರಿಗಳನ್ನೂ ತರಾಟೆ ‌ತೆಗೆದುಕೊಂಡ‌ರು.

 


ಸಂಬಂಧಿತ ಟ್ಯಾಗ್ಗಳು

under pass Rain ಜಿಲ್ಲಾಡಳಿತ ಅವೈಜ್ಞಾನಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ