ಮೈತ್ರಿ ಸರ್ಕಾರ ದಾರಿ ತಪ್ಪಿದೆ: ಅನಂತ್ ಕುಮಾರ್

08-06-2018
ಬೆಂಗಳೂರು: ವಿಧಾನಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾನೂ ಸಹಾ ಇವತ್ತು ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಮತ ಚಲಾಯಿಸಿದ್ದೇನೆ. ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅನಂತ್ ಕುಮಾರ್, ಈ ಸರ್ಕಾರ ದಿಕ್ಕು ತಪ್ಪಿದೆ. ಸರ್ಕಾರ ಅತಂತ್ರ ಪರಿಸ್ಥಿತಿಯಲ್ಲಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 25 ಸಚಿವರು ಖಾತೆ ರಹಿತರಾಗಿದ್ದಾರೆ ಎಂದು ಟೀಕಿಸಿದರು. ಸರಕಾರ ರಚನೆ ಆದ ಮೇಲೂ 25ಸಚಿವರು ಖಾತೆ ರಹಿತರಾಗಿದ್ದಾರೆ. ಖಾತೆ ಹಂಚಿಕೆಯಲ್ಲಿ ಎರಡೂ ಪಕ್ಷಗಳಲ್ಲಿ ಬಿಕ್ಕಟ್ಟು ತಲೆದೋರಿದೆ.
ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಪುನರ್ ಸಮೀಕರಣ ನಡೆಯಲಿದೆ ಎಂದು ಅನಂತ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಇಷ್ಟವಿಲ್ಲ. ಈ ಮೈತ್ರಿ ಸರಕಾರ ರಾಜ್ಯದ ಜನತೆಗೂ ಇಷ್ಟವಿಲ್ಲ. ಸರ್ಕಾರ ಬಿಕ್ಕಟ್ಟು ಮತ್ತೊಂದು ರಾಜಕೀಯ ಪುನರ್ ಸಮೀಕರಣಕ್ಕೆ ದಾರಿ ಮಾಡಿಕೊಡಲಿದೆ ಎಂದು ಹೇಳಿದರು.
ಒಂದು ಕಮೆಂಟನ್ನು ಹಾಕಿ