ದೆಹಲಿಯಲ್ಲಿ ಬೀಡುಬಿಟ್ಟಿರುವ ಎಂ.ಬಿ ಪಾಟೀಲ್!

MLA M.B Patil at delhi to meet congress high command!

09-06-2018

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಮುಖಂಡರಿಂದ ಭುಗಿಲೆದ್ದಿರುವ ಭಿನ್ನಮತ ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ನಿನ್ನೆ ಇಡೀ ಕಾಂಗ್ರೆಸ್ ನಾಯಕರ ದಂಡು ಎಂ.ಬಿ ಪಾಟೀಲರನ್ನು ಮನವೊಲಿಸುವ ಯತ್ನ ನಡೆಸಿದರಾದರೂ ಪ್ರಯೋಜನವಾಗಲಿಲ್ಲ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಂ.ಬಿ ಪಾಟೀಲ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಎಂ.ಬಿ ಪಾಟೀಲ್, ದೆಹಲಿಯ ಖಾಸಗಿ ಹೊಟೇಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಕೇಂದ್ರ ನಾಯಕರಾದ ಗುಲಾಂನಬಿ ಆಜಾದ್, ಅಶೋಕ್ ಗೆಹ್ಲೋಟ್ ಭೇಟಿಗೆ ಸಮಯ ಕೇಳಿದ್ದಾರೆ. ಇಬ್ಬರು ನಾಯಕರ ಭೇಟಿ ಬಳಿಕ ರಾಹುಲ್ ಗಾಂಧಿಯವರನ್ನೂ ಭೇಟಿ ಮಾಡುವ ಸಾಧ್ಯತೆಗಳಿವೆ. ಎಂ.ಬಿ ಪಾಟೀಲ್‌‌ ದೆಹಲಿಗೆ ದೌಡಾಯಿಸಿದ ಬೆನ್ನಲ್ಲೆ ದಿನೆಶ್ ಗುಂಡೂರಾವ್ ದೆಹಲಿಗೆ ತೆರಳಿದ್ದಾರೆ. ಎಂ.ಬಿ ಪಾಟೀಲ್ ಹಾಗು ದಿನೇಶ್ ಗುಂಡೂರಾವ್ ಜೊತೆ ಹೈಕಮಾಂಡ್ ಮಾತುಕತೆ ನಡೆಸಲಿದೆ.


ಸಂಬಂಧಿತ ಟ್ಯಾಗ್ಗಳು

M.B Patil Delhi ನಾಯಕ ಬುಲಾವ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ