ಎಚ್.ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ!

kuruba organisation demanding minister post to h.vishwanath

09-06-2018

ಬೆಂಗಳೂರು: ಹುಣಸೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆಗ್ರಹಿಸಿ ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪುರಭವನ ಮುಂಭಾಗ ಸೇರಿದ ಒಕ್ಕೂಟದ ನೂರಾರು ಕಾರ್ಯಕರ್ತರು ಹಿರಿಯ ಶಾಸಕ, ಅನುಭವಿ ರಾಜಕಾರಣಿ, ಕುರುಬ ಸಮಾಜದ ಪ್ರಭಾವಿ ನಾಯಕರಾಗಿರುವ ವಿಶ್ವನಾಥ್ ಅವರಿಗೆ ಕೂಡಲೇ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‍ನ ಹೆಚ್ಚಿನ ಶಾಸಕರನ್ನು ಗೆಲ್ಲಿಸುವಲ್ಲಿ ವಿಶ್ವನಾಥ್ ಕಾರಣರಾಗಿದ್ದಾರೆ. ಅಂತಹ ನಾಯಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಕುರುಬ ಜನಾಂಗಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಒತ್ತಾಯಿಸಿದರು. ಪ್ರತಿಭಟನೆಯ ನೇತೃತ್ವವನ್ನು ಒಕ್ಕೂಟದ ರಾಜ್ಯಾಧ್ಯಕ್ಷ ಕೋದಂಡರಾಮು ವಹಿಸಿದ್ದರು.


ಸಂಬಂಧಿತ ಟ್ಯಾಗ್ಗಳು

H.Vishwanath Cabinet ನಾಯಕ ಕುರುಬ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ