ಜಯನಗರ: ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

election for jayanagar constituency today

11-06-2018

ಬೆಂಗಳೂರು: ಇಂದು ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಬೆಳಗ್ಗಿನಿಂದಲೇ ಮತಗಟ್ಟೆಗಳಿಗೆ ಬಂದು ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯರವೆರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಒಟ್ಟು 216 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ಮಹಿಳೆಯರಿಗೆ 5 ಪಿಂಕ್ ಬೂತ್ ಗಳ ವ್ಯವಸ್ಥೆಯನ್ನೂ ಕಲ್ಪಿಸಿಲಾಗಿದೆ. ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 216 ಮತಗಟ್ಟೆಗಳ ಪೈಕಿ 42 ಮತಗಟ್ಟೆಗಳನ್ನು ಸೂಕ್ಷ್ಮ‌ ಎಂದು ಪರಿಗಣಿಸಿಲಾಗಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 10ಪ್ಯಾರಾಮಿಲಿಟರಿ ಫೋರ್ಸ್, 350 ಜನ ಪೊಲೀಸರು, ಒಟ್ಟು 23 ಫ್ಲೈಯಿಂಗ್ ಸ್ಕ್ವಾಡ್ ಗಳು ಹದ್ದಿನ ಕಣ್ಣಿಟ್ಟಿದ್ದಾರೆ.

ಬಿಜೆಪಿ ಅಭ್ಯರ್ಥಿ ದಿ.ವಿಜಯ ಕುಮಾರ್ ನಿಧನದ ಹಿನ್ನೆಲೆ ಜಯನಗರ ಕ್ಷೇತ್ರಕ್ಕೆ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಿಜೆಪಿಯ ಪ್ರಹ್ಲಾದ್ ಬಾಬು, ಕಾಂಗ್ರೆಸ್ ನ ಸೌಮ್ಯಾ ರೆಡ್ಡಿ ಮತ್ತು ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ