ಕೇಂದ್ರ ಬಿಜೆಪಿ ವಿರುದ್ಧ ರಮಾನಾಥ ರೈ ಪ್ರತಿಭಟನೆ

Ramanath Rai protests against central BJP

11-06-2018

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಪ್ರತಿಭಟಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ನಂತರದಲ್ಲಿ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಸಿದ ರಮಾನಾಥ ರೈ ಅವರು, 'ಕೇಂದ್ರ ಬಿಜೆಪಿ ಸರ್ಕಾರ ರಾಷ್ಟ್ರೀಯ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಮಾಡುವುದಿಲ್ಲ. ದೇಶದ ಹಣವನ್ನು ಕೊಳ್ಳೆ ಹೊಡೆದಿರುವ ಉದ್ಯಮಿಗಳ ಲಕ್ಷಾಂತರ ಕೋಟಿ ಸಾಲವನ್ನು ಮನ್ನಾ ಮಾಡುತ್ತಿದೆ' ಎಂದು ಆರೋಪಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ramanath Rai Protest ಕೇಂದ್ರ ಸರ್ಕಾರ ಸಾಲಮನ್ನಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ