ಸಿಬಿಐ-ಮಹಾರಾಷ್ಟ್ರ ಎಸ್ಐಟಿ ಇಂದ ಶಂಕಿತರ ತೀವ್ರ ವಿಚಾರಣೆ

gauri lankesh murder: Investigations of suspects from the CBI and the Maharashtra SIT

11-06-2018

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ವಿಶೇಷ ತನಿಖಾ ತಂಡದ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ನಗರಕ್ಕೆ ಆಗಮಿಸಿರುವ ಸಿಬಿಐ ಮತ್ತು ಮಹಾರಾಷ್ಟ್ರ ವಿಶೇಷ ತನಿಖಾದಳದ ಅಧಿಕಾರಿಗಳು ಶಂಕಿತರ ತೀವ್ರ ವಿಚಾರಣೆ ನಡೆಸಿದ್ದಾರೆ.

ನಗರದಲ್ಲಿ ನಾಲ್ಕೈದು ದಿನ ತಂಗಲಿರುವ ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ನಡೆದ ವಿಚಾರವಾದಿ ಪನ್ಸಾರೆ ಮತ್ತು ದಾಭೋಲ್ಕರ್ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಶಂಕಿತ ಆರೋಪಿಗಳು ಎಂಎಂ ಕಲ್ಬುರ್ಗಿ ಹತ್ಯೆಯಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಏಕೆಂದರೆ ಇವರಿಬ್ಬರ ಕೊಲೆಗೆ ಒಂದೇ ರೀತಿಯ ಪಿಸ್ತೂಲ್ ಬಳಕೆಯಾಗಿದೆ. ಶಂಕಿತ ಹಂತಕರಿಗೂ ಪನ್ಸಾರೆ, ದಾಭೋಲ್ಕರ್ ಹತ್ಯೆಗೂ ಸಂಬಂಧವಿರಬಹುದು ಎನ್ನುವ ಶಂಕೆಯ ಮೇಲೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲಿದ್ದಾರೆ.

ಈಗಾಗಲೇ ಆರೋಪಿಗಳನ್ನು ಅಧಿಕಾರಿಗಳು ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಈ ಮ್ಯಾರಥಾನ್ ವಿಚಾರಣೆ ವೇಳೆ ಶಂಕಿತ ಆರೋಪಿಗಳು ಹಲವು ಅಂಶಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಮರಾಠಿಯಲ್ಲೇ ಪ್ರಶ್ನೆ ಕೇಳಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವಿನಿಂದ ಶಂಕಿತ ಆರೋಪಿಗಳು ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

SIT Police CBI ಪತ್ರಕರ್ತೆ ತನಿಖಾ ತಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ