ಮಹಿಳಾ ಪೇದೆಗೆ ಯುವಕನಿಂದ ಲೈಂಗಿಕ ದೌರ್ಜನ್ಯ!

Sexual assault on women police constable!

11-06-2018

ಬೆಂಗಳೂರು: ಪರೀಕ್ಷಾ ತರಬೇತಿ ಕೇಂದ್ರಕ್ಕೆ ಹೋಗುತ್ತಿದ್ದ ವೇಳೆ ಪರಿಚಯವಾಗಿದ್ದ ಮಹಿಳಾ ಪೊಲೀಸ್ ಪೇದೆಯನ್ನು ವಂಚಿಸಿ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಹೀನ ಕೃತ್ಯ ಉಪ್ಪಾರಪೇಟೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಪೊಲೀಸ್ ಠಾಣೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇದೆಯ ಮೇಲೆ ಅತ್ಯಾಚಾರ ಎಸಗಿರುವ ಬಾಗಲಕೋಟೆಯ ಜಮಖಂಡಿ ಮೂಲದ ಅಮೀನ್ ಸಾಬ್‍ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಪೊಲೀಸ್ ಸಬ್‍ಇನ್ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆಯಲು ಕಳೆದ 2015ರಲ್ಲಿ ವಿಜಯಪುರದಲ್ಲಿ ಕೋಚಿಂಗ್ ಹೋಗುತ್ತಿದ್ದ ವೇಳೆ ಅಮೀನ್ ಸಾಬ್‍ಗೆ ಮಹಿಳಾ ಪೇದೆ  ಪರಿಚಯವಾಗಿದ್ದರು ಅಲ್ಲಿಂದ ಮೂರು ವರ್ಷಗಳ ಕಾಲ ಆರೋಪಿ ಅಮೀನ್ ಸಾಬ್ ಮದುವೆಯಾಗುವುದಾಗಿ ಪೇದೆಯನ್ನು ನಂಬಿಸಿ ಪ್ರೀತಿ ಮಾಡುತ್ತಿದ್ದನು. ನಂತರ ಮದುವೆಯಾಗುವುದಾಗಿ ಹೇಳಿ ಬೆಂಗಳೂರಿನ ಉಪ್ಪಾರಪೇಟೆಯ ಲಾಡ್ಜ್ ಗೆ ಕರೆದಿದ್ದಾನೆ. ಅಲ್ಲಿ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಸಂತ್ರಸ್ತೆ ಮದುವೆ ಬಗ್ಗೆ ಪ್ರಸ್ತಾಪ ಮಾಡಿದಾಗ ಆರೋಪಿ ಜಾತಿ, ಧರ್ಮದ ನೆಪವೊಡ್ಡಿ ಮದುವೆಯಾಗಲು ನಿರಾಕರಿಸಿದ್ದಾನೆ. ಬೇಸತ್ತ ಪೇದೆ ಕಾಮುಕನ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೇ ಅಮೀನ್ ಸಾಬ್ ಕುಟುಂಬದವರಿಂದ ಜೀವ ಬೆದರಿಕೆ ಬಂದಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಅತ್ಯಾಚಾರ ಮತ್ತು ಜಾತಿನಿಂದನೆ ಅಡಿಯಲ್ಲಿ ದೂರು ದಾಖಲಾಗಿದೆ. ಇತ್ತ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಅಮೀನ್ ಸಾಬ್ ನಾಪತ್ತೆಯಾಗಿದ್ದು, ಉಪ್ಪಾರಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ