ನಾಳೆಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ

Bus passes for PUC students issuing from tomorrow

11-06-2018

ಬೆಂಗಳೂರು: ಕೆ.ಎಸ್.ಆರ್.ಟಿ.ಸಿಯಿಂದ 2018-19ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ನಾಳೆಯಿಂದ ಬಸ್ ಪಾಸುಗಳನ್ನು ವಿತರಣೆ ಮಾಡಲಾಗುತ್ತಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತದೆ. ಸದರಿಯವರು ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿಗೆ 150 ರೂ ಪಾವತಿಸಬೇಕಿರುತ್ತದೆ. ಈ ವರ್ಗದ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು ಅರ್ಜಿಯ ಜೊತೆಗೆ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಉಳಿದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವರ್ಗದ ವಿದ್ಯಾರ್ಥಿಗಳು ರೂ.1050 ಗಳನ್ನು ಪಾವತಿಸಿ ಪಾಸುಗಳನ್ನು ಪಡೆಯಬೇಕಾಗಿದೆ. ಇದರಲ್ಲಿ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಒಳಗೊಂಡಿದೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ನಿಂದಲೇ ತರಗತಿಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಕಳೆದ ವರ್ಷದ ಪಾಸನ್ನು ತೋರಿಸಿ ಈ ಮಾಸಾಂತ್ಯದವರೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ನಿಗಮದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಹಾಗೂ ನಿಗಮದ ವೆಬ್‍ಸೈಟ್‍ನಲ್ಲಿ (www.ksrtc.in) ಪಾಸ್ ಅರ್ಜಿಗಳು ಲಭ್ಯವಿರುತ್ತದೆ. ಭರ್ತಿಗೊಳಿಸಿದ ಅರ್ಜಿಗಳನ್ನು ಕಾಲೇಜುಗಳಲ್ಲಿ ದೃಢೀಕರಿಸಬೇಕಿರುತ್ತದೆ. ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವ ಸಂಬಂಧಪಟ್ಟ ಕಾಲೇಜುಗಳ ಮುಖಾಂತರ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳು ನೇರವಾಗಿ ಪಾಸ್ ಕೌಂಟರ್‍ ಗೆ ಬರುವ ಅವಶ್ಯಕತೆಯಿಲ್ಲ ಎಂದು ಹೇಳಿದೆ.


ಸಂಬಂಧಿತ ಟ್ಯಾಗ್ಗಳು

Bus Pass KSRTC ವಿದ್ಯಾರ್ಥಿ ಪರಿಶಿಷ್ಟ ಜಾತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ