ಮೈಸೂರಿಗಿಂದು ಮಾಜಿ ಸಿಎಂ ಭೇಟಿ

siddaramaiah to visit Mysore today

12-06-2018

ಮೈಸೂರು: ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ. 11ಗಂಟೆಗೆ ನಡೆಯಲಿರುವ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿರುವ ಸಿದ್ದರಾಮಯ್ಯ, ಪುತ್ರ ಯತೀಂದ್ರ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು ಹಾಗು ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ತಿಳಿಸಲು ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

siddaramaiah Mysuru ಚುನಾವಣೆ ವಿಮಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ