ತಹಶೀಲ್ದಾರ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ

accidental fire at tahsildar office

12-06-2018

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ತಹಶೀಲ್ದಾರ ಕಚೇರಿಗೆ ಆಕಸ್ಮಿಕ ಬೆಂಕಿ ತಗುಲಿ ಲ್ಯಾಪ್‌ ಟಾಪ್ ಸೇರಿದಂತೆ ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿವೆ. ಚುನಾವಣಾ ವಿಭಾಗದ ಕೊಠಡಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರತಿವರ್ಷವೂ ತಹಶೀಲ್ದಾರರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದು, ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.  ತಹಶೀಲ್ದಾರ ಸಂತೋಷ ರಾಣಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ