ಮಲೆನಾಡಲ್ಲಿ ಭಯಂಕರ ಮಳೆ: ಜನಜೀವನ ಅಸ್ತವ್ಯಸ್ತ

12-06-2018
ಚಿಕ್ಕಮಗಳೂರು: ರಾಜ್ಯದ ಮಲೆನಾಡ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಶೃಂಗೇರಿ, ಕೊಪ್ಪ, ಮೂಡಿಗೆರೆ, ಎನ್.ಆರ್.ಪುರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆ ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳ ಒಳಹರಿವೂ ಹೆಚ್ಚಳವಾಗಿದೆ. ಮೂಡಿಗೆರೆ, ಶೃಂಗೇರಿ, ಕಳಸ, ಹೊರನಾಡು, ಕುದುರೆಮುಖ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಮಲೆನಾಡಿನ ಅನೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ನೂರಾರು ಸಂಖ್ಯೆಯಲ್ಲಿ ಮರಗಳು ಧರೆಗುರುಳಿವೆ. ಮಳೆಯಿಂದಾಗಿ ಮಲೆನಾಡಿಗರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಒಂದು ಕಮೆಂಟನ್ನು ಹಾಕಿ