ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಸಂಚಾರಕ್ಕೆ ತಡೆ

Heavy rain: Charmadi Ghat route changed!

12-06-2018

ಚಿಕ್ಕಮಗಳೂರು: ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿದೆ. ಮಳೆ ಸುರಿಯುತ್ತಲೇ ಇದ್ದು ಮತ್ತೆ ಮಣ್ಣು ಕುಸಿಯುವ ಸಾಧ್ಯತೆಗಳು ಹೆಚ್ಚಿರುವುದರಿಂದ ಚಾರ್ಮಾಡಿ ಘಾಟ್ ಸಂಚಾರ ಬಂದ್ ಮಾಡಲಾಗಿದೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗ ಮಾಡಲಾಗಿದೆ.

ಶೀಘ್ರ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ, ಎಸ್.ಕೆ.ಬಾರ್ಡರ್, ಕುದುರೆಮುಖ ಮೂಲಕ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಸಂಚಾರ ಮಾರ್ಗ ಬದಲಾವಣೆಯಾದ್ದರಿಂದ, ಕಳೆದ ಮೂರು ಗಂಟೆಯಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ಮಂಗಳೂರಿನಿಂದ ಬರುವ ವಾಹನಗಳಿಗೆ ಧರ್ಮಸ್ಥಳ, ಉಜಿರೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಂಗಳೂರು, ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳಿಗೆ ಕೊಟ್ಟಿಗೆಹಾರದಲ್ಲಿ ಮಾರ್ಗ ಬದಲಾವಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Charmadi Ghat Chikmagalur ಧರ್ಮಸ್ಥಳ ಗುಡ್ಡ ಕುಸಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ