ಭಯಾನಕ ಬೈಕ್ ವ್ಹೀಲಿಂಗ್: 45 ಯುವಕರ ಬಂಧನ

Horror Bike Wheeling: 45 people arrested

12-06-2018

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಯಾನಕ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಪತ್ತೆಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು 30 ಬೈಕ್ ಗಳನ್ನು ಹಾಗೂ 45ಮಂದಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಯುವಕರು ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರದವರಾಗಿದ್ದಾರೆ. ಯುವಕರು ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು.

ಬೈಕ್ ವ್ಹೀಲಿಂಗ್‍ನಿಂದ ಉಂಟಾಗಿರುವ ಅಪಘಾತಗಳು ವಾಹನ ಸವಾರಿರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ನಿನ್ನೆ ತಡ ರಾತ್ರಿ ಕಾರ್ಯಾಚರಣೆ ನಡೆಸಿದ ನೆಲಮಂಗಲ ಪಟ್ಟಣ ಪೊಲೀಸರು, ಬೈಕ್‍ಗಳನ್ನು ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ