ಸರ್ಕಾರಿ ಬಂಗಲೆಗಳಲ್ಲಿ ವಾಸ್ತುದೋಷ ಎಂದ ದೇವೇಗೌಡರು

HD deve gowda

12-06-2018

ಬೆಂಗಳೂರು: ಸರ್ಕಾರಿ ಬಂಗಲೆಗಳಲ್ಲಿ ವಾಸ್ತುದೋಷವಿದ್ದು, ನೀವು ಇರುವ ಮನೆಗಳಲ್ಲಿಯೇ ವಾಸ್ತವ್ಯ ಹೂಡುವುದು ಒಳ್ಳೆಯದು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಮ್ಮ ಮಕ್ಕಳಿಗೆ ಸಲಹೆ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದು ಬೇಡ ಎಂದು ಬುದ್ಧಿ ಮಾತು ಹೇಳಿದ್ದಾರೆ. ಸರ್ಕಾರದ ಯಾವ ಬಂಗಲೆಗಳ ವಾಸ್ತುವೂ ಸರಿ ಇಲ್ಲ. ಹೀಗಾಗಿ ನೀವು ಈಗಿರುವ ಮನೆಗಳಲ್ಲಿಯೇ ವಾಸಿಸುವುದು ಸೂಕ್ತ ಎಂದು ತಿಳಿ ಹೇಳಿದ್ದಾರೆ.

ಆದರೆ ಹಾಲಿ ಇರುವ ಖಾಸಗಿ ನಿವಾಸಗಳ ಬಳಿ ಬರುವ ಸಾರ್ವಜನಿಕರು ಹಾಗೂ ಕಾರ್ಯಕರ್ತರನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ರೇವಣ್ಣ ವಾಸ್ತು ಸರಿ ಇರುವಂತಹ ದೊಡ್ಡ ಬಂಗಲೆಗಳನ್ನು ಹುಡುಕುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ದೇವೇಗೌಡರು ಸಿಎಂ ಆಗಿದ್ದಾಗ ಸರ್ಕಾರಿ ಬಂಗಲೆ ಅನುಗ್ರಹದಲ್ಲಿದ್ದರು. ಬಳಿಕ ಅದೇ ಅನುಗ್ರಹ ನಿವಾಸದಲ್ಲಿ ವಸತಿ ಸಚಿವರಾಗಿದ್ದಾಗ ರೇವಣ್ಣ ಸಹ ವಾಸವಿದ್ದರು. ಇನ್ನು 2006ರಲ್ಲಿ ಸಿಎಂ ಆದಾಗ ಹೆಚ್.ಡಿ.ಕುಮಾರಸ್ವಾಮಿ ಸಹ ಅನುಗ್ರಹ ನಿವಾಸದಲ್ಲೇ ವಾಸವಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ