ಈಶಾನ್ಯ ಪದವೀಧರ ಕ್ಷೇತ್ರ: ಕಾಂಗ್ರೆಸ್ ಗೆಲುವು

North East Graduate election: Congress Won

13-06-2018

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಎರಡನೆ ಪ್ರಾಶಸ್ತ್ಯದ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಬಿ.ಶ್ರೀನಿವಾಸ ವಿರುದ್ಧ ಗೆಲುವು ಸಾಧಿಸಿದ್ದಾರೆ. ಡಾ.ಚಂದ್ರಶೇಖರ ಪಾಟೀಲ ಅವರು 18,768 ಮತಗಳನ್ನು ಪಡೆದರು. ಬಿಜೆಪಿ ಅಭ್ಯರ್ಥಿ ಕೆ.ಬಿ.ಶ್ರೀನಿವಾಸ್ 18,447 ಮತಗಳನ್ನು ಪಡೆದು ಎರಡನೇ ಸ್ಥಾನ ಹಾಗೂ ಜೆಡಿಎಸ್‌ನ ಪ್ರತಾಪ್ ರೆಡ್ಡಿ  13,311 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.

ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ ಈಶಾನ್ಯ ಪದವೀಧರ ಕ್ಷೇತ್ರ, ಪ್ರಥಮ ಬಾರಿಗೆ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯರ್ತರು ವಿಜಯೋತ್ಸವ ಆಚರಿಸಿದರು. 


ಸಂಬಂಧಿತ ಟ್ಯಾಗ್ಗಳು

congress Chandra Shaker Patil ಫಲಿತಾಂಶ ಪ್ರಾಶಸ್ತ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ