ಡಿಎಸಿಂ ಮನೆ ಮುಂದೆ ಶ್ಯಾಮನೂರು ಬೆಂಬಲಿಗರ ಪ್ರತಿಭಟನೆ

shamanur shivashankarappa followers protest in front of dcm resident

13-06-2018

ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ, ಶ್ಯಾಮನೂರು ಬೆಂಬಲಿಗರು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ‌ನಿವಾಸದ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಸದಾಶಿವನಗರದ ಪರಮೇಶ್ವರ್ ನಿವಾಸ ಎದುರು ಜಮಾಯಿಸಿರುವ ನೂರಾರು ಬೆಂಬಲಿಗರು ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಎರಡನೇ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೊಡುವಂತೆ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಸ್ಥಳೀಯ ನಗರ ಪಾಲಿಕೆ ಸದಸ್ಯರು, ಡಿಸಿಎಂ ಡಾ.ಜಿ.ಪರಮೇಶ್ವರ್ ಬಳಿ ಮನವಿ ಮಾಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಕೊಡದೇ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಎಚ್ಚರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

G. Parameshwara DCM ಸಚಿವ ಸಂಪುಟ ಪಾಲಿಕೆ ಸದಸ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ