ನಿನ್ನೆ ಚಾರ್ಮಾಡಿ ಇಂದು ಮಡಿಕೇರಿ...

Heavy Rain at Madikeri

13-06-2018

ಮಡಿಕೇರಿ: ಮಲೆನಾಡ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ದಕ್ಷಿಣ ಕೊಡಗಿನಲ್ಲಿ ಸುರಿದ ಧಾರಾಕಾರ ಮಳೆಗೆ ಗುಡ್ಡಕುಸಿದು ಶೆಟ್ಟಿಗೇರಿ-ಬಿರುನಾಣಿ ರಸ್ತೆ ಸಂಪರ್ಕ ಬಂದ್ ಮಾಡಲಾಗಿದೆ.  ಮತ್ತೊಂದೆಡೆ ವಿರಾಜಪೇಟೆಯಿಂದ ಕೇರಳಕ್ಕೆ ತೆರಳುವ ಮಾರ್ಗದಲ್ಲಿ ಬೃಹತ್ ಮರಗಳು ರಸ್ತೆ ಮೇಲೆ ಉರುಳಿ ಬಿದ್ದ ಪರಿಣಾಮ ಈ ಮಾರ್ಗದ ಸಂಚಾರವನ್ನೂ ಸಹ ಸ್ಥಗಿತಗೊಳಿಸಲಾಗಿದೆ. ಮಾಕುಟ್ಟದಲ್ಲಿ ಹತ್ತಾರು ಮರಗಳು ಬುಡ ಸಹಿತ ಮೇಲೆದ್ದಿವೆ. ಲಕ್ಷ್ಮಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದ್ದು, ನಾಪೋಕ್ಲು-ಭಾಗಮಂಡಲ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ವಿರಾಜಪೇಟೆ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ನೀಡಿಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ