ಮೊಬೈಲ್ ಟವರ್ ಏರಿ ಕುಳಿತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ

Kannada News

22-02-2017 247

ರಾಯಚೂರು: ಮೊಬೈಲ್ ಟವರ್ ಏರಿ ಕುಳಿತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ ಕೃಷಿ ತಾಂತ್ರಿಕ ಪದವೀಧರರನ್ನೂ ಪರಿಗಣಿಸಬೇಕೆಂದು ಒತ್ತಾಯಿಸಿ, ವಿದ್ಯಾರ್ಥಿ ಸಂಕೇತ್ ಎಂಬಾತ ಲಿಂಗಸಗೂರು ರಸ್ತೆಯ ಮೊಬೈಲ್ ಟವರ್ ಏರಿದ್ದಾನೆ.

ರಾಯಚೂರು ಕೃಷಿ ಕಾಲೇಜ್ ಆವರಣದಲ್ಲಿರುವ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಧಾರವಾಡ ಮೂಲದ ಸಂಕೇತ್ ಬಿ.ಟೆಕ್ ಓದುತ್ತಿದ್ದಾನೆ.ಈತನೂ ಸೇರಿದಂತೆ ವಿದ್ಯಾರ್ಥಿಗಳು ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಸಿದ್ದರು. ಆದರೆ, ಅಧಿಕಾರಿಗಳು ಸ್ಪಂದಿಸದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಲಿಂಗಸಗೂರು ರಸ್ತೆಯ ಮೊಬೈಲ್ ಟವರ್ ಏರಿ ಕುಳಿತಿರುವ ಸಂಕೇತ್ ನನ್ನು ಕೆಳಗಿಳಿಸುವ ಪ್ರಯತ್ನಗಳು ನಡೆದಿದೆ.

Links :
ಸಂಬಂಧಿತ ಟ್ಯಾಗ್ಗಳು

ಸಂಬಂಧಿತ ಟ್ಯಾಗ್ಗಳನ್ನು ಲಭ್ಯವಿಲ್ಲಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ