ಜಯನಗರವನ್ನು ಗೆದ್ದ ಸೌಮ್ಯಾರೆಡ್ಡಿ

Congress won Jayanagar assembly seat in Karnataka

13-06-2018

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸೌಮ್ಯಾರೆಡ್ಡಿ ಗೆಲುವು ಸಾಧಿಸಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ 53,441 ಮತಗಳನ್ನುಗಳಿಸಿ ಜಯದ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್‌ ಬಾಬು ವಿರುದ್ಧ 2,889 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕ್ಷೇತ್ರದಲ್ಲಿ ಗೆಲುವನ್ನು ನಿರೀಕ್ಷೆ ಮಾಡಿದ್ದೆವು. ಆದರೆ, ಅಂತರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಜೆಡಿಎಸ್ ಸಹಕಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ ಎಂದರು. ಇದೇ ವೇಳೆ 'ಸೌಮ್ಯರೆಡ್ಡಿಗೆ ಸಚಿವ ಸ್ಥಾನಕ್ಕಾಗಿ ನಾನು ಲಾಬಿ ನಡೆಸೋದಿಲ್ಲ' ಎಂದು ಹೇಳಿದ್ದಾರೆ.

ಇನ್ನು ಮೌರ್ಯ ಸರ್ಕಲ್ ಬಳಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿ, ರಾಮಲಿಂಗಾ ರೆಡ್ಡಿ ಹಾಗೂ ಸೌಮ್ಯಾರೆಡ್ಡಿಗೆ ಜೈಕಾರ ಹಾಕಿದರು.

 


ಸಂಬಂಧಿತ ಟ್ಯಾಗ್ಗಳು

Jayanagar Sowmya Reddy ಧನ್ಯವಾದ ಕುತೂಹಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ