‘ಪ್ರಹ್ಲಾದ್‌ ಬಾಬು ಕಡಿಮೆ ಅಂತರದಲ್ಲಿ ಸೋತಿದ್ದಾರೆ’-ಬಿಎಸ್ ವೈ

B.S yeddyurappa reaction on jaynagar election result

13-06-2018

ಬೆಂಗಳೂರು: ಪದವೀಧರ, ಶಿಕ್ಷಕರ ಕ್ಷೇತ್ರಗಳ ಪೈಕಿ ಮೂರರಲ್ಲಿ ಜಯಗಳಿಸಿದ್ದೇವೆ. ಪದವೀಧರ ಮತ್ತು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪ್ರಹ್ಲಾದ್ ಬಾಬು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ನಮ್ಮ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜಯನಗರ ಮತದಾರರು ನಮ್ಮ ಮೇಲೆ ವಿಶ್ವಾಸ ಇಟ್ಟು ಹೆಚ್ಚು ಮತ ಕೊಟ್ಟಿದ್ದಾರೆ ಅವರಿಗೆ ಕೃತಜ್ಞತೆ ಎಂದರು.

ಜೆಡಿಎಸ್ ಅಭ್ಯರ್ಥಿ ಕೊನೇಗಳಿಗೆಯಲ್ಲಿ ಹೊಂದಾಣಿಕೆ ಮಾಡಿಕೊಂಡರು, ಇದರಿಂದ ನಮಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದೆ. ಪ್ರಹ್ಲಾದ್ ಬಾಬು ಹೊಸ ಮುಖ, ಜನರಿಗೆ ಪರಿಚಯ ಇರಲಿಲ್ಲ, ಆದರೂ ಹೆಚ್ಚು ಮತ ಕೊಟ್ಟಿದ್ದಾರೆ, ಎಲ್ಲರ ಶ್ರಮದಿಂದ ಹೆಚ್ಚು ಮತ ಸಿಕ್ಕಿದೆ ಎಂದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ