ಖಾತೆ ಹಂಚಿಕೆ: 'ಎಲ್ಲರನ್ನೂ ಸಮಾಧಾನ ಪಡಿಸಲಾಗಲ್ಲ'

AICC president had approved karnataka ministers list so all should obey the orders

13-06-2018 399

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಕೆಲವರಿಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಎಲ್ಲರೂ ಮಂತ್ರಿ ಆಗಲು ಸಾಧ್ಯವಿಲ್ಲ. ಎಲ್ಲರಿಗೂ ಒಳ್ಳೆಯ ಖಾತೆ ಸಿಗೋದಿಲ್ಲ ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅತೃಪ್ತಿ, ಅಸಮಾಧಾನ ಸಹಜ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ನಾವು ಅಂದುಕೊಂಡಂತೆ ಆಗುವುದಿಲ್ಲ. ಎಲ್ಲರಿಗೂ ಸಚಿವ ಆಗಬೇಕೆಂಬ ಆಸೆ ಇರುತ್ತದೆ. ಆದರೆ, ಎಲ್ಲವೂ ಅಂದುಕೊಂಡಂತೆ ನಡೆಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಅತೃಪ್ತಿ, ಅಸಮಾಧಾನ ಸಹಜ, ಅಸಮಧಾನ ಇರಲೇಬಾರದು ಅಂತ ನಾನು ಹೇಳಲ್ಲ. ಯಾರು ಸಚಿವರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಚಿವರ ಪಟ್ಟಿ ಅಪ್ರೂವ್ ಮಾಡಿದ್ದಾರೆ. ಹೀಗಿರುವಾಗ ಎಲ್ಲರೂ ಪಕ್ಷದ ನಿರ್ಧಾರವನ್ನು ಗೌರವಿಸಬೇಕಾಗುತ್ತದೆ. ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗುತ್ತದೆ ಎಂದರು.

ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ, ಅದು ಅವರ ವೈಯಕ್ತಿಕ ವಿಚಾರ, ಆ ಬಗ್ಗೆ ನಾನು ರಿಯಾಕ್ಟ್ ಮಾಡಲ್ಲ. ಅಷ್ಟನ್ನು ಬಿಟ್ಟರೆ ಬೇರೇನೂ ಸಮಸ್ಯೆ ಇಲ್ಲವೆಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

siddaramaiah satish jarkiholi ಅಸಮಾಧಾನ ಅತೃಪ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ