ವೈಯಕ್ತಿಕ ದ್ವೇಷ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!

Personal hatred: BJP workers attacked by a group

13-06-2018 384

ಬೆಂಗಳೂರು: ಜಯನಗರದ ಶಾಕಂಬರಿ ನಗರದಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಧೀರಜ್ ಅವರನ್ನು ಸಾರಕ್ಕಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸ್ಥಳಕ್ಕೆ ದಕ್ಷಿಣ ವಲಯ ಡಿಸಿಪಿ ಶರಣಪ್ಪ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಧಾನಪಡಿಸಿದ್ದಾರೆ, ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೈಯಕ್ತಿಕ ಕಾರಣ ಶಂಕೆ ವ್ಯಕ್ತಪಡಿಸಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

BJP worker Assault ವೈಯಕ್ತಿಕ ಸಮಧಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ