ಎಂಜಿನಿಯರ್ ಆತ್ಮಹತ್ಯೆ: ಕಂಪೆನಿ ವಿರುದ್ಧ ಪ್ರಕರಣ ದಾಖಲು

Engineer Suicide: Case Against Company!

13-06-2018

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಸಾಫ್ಟ್ ವೇರ್ ಎಂಜಿನಿಯರ್ ಭವೇಶ್  ಜೈಸ್ವಾನ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಯು ಸಿಗ್ಮಾ ಕಂಪೆನಿಯ ವಿರುದ್ಧ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೇ ಉದ್ಯೋಗಿಯಾಗಿರುವ ಭವೇಶ್ ಅವರ ತಂದೆ ಮಹೇಂದ್ರ ಜೈಸ್ವಾನ್ ನೀಡಿದ್ದ ದೂರು ಆಧರಿಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ವೈಟ್‍ ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಎಂಯು ಸಿಗ್ಮಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭವೇಶ್ ಜೂನ್ 11ರ ಸಂಜೆ ಕಂಪೆನಿಯ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಂಪೆನಿಯಲ್ಲಿ ತನ್ನ ಮಗನಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಕಂಪೆನಿಯ ಕೆಲಸದ ಒತ್ತಡದ ಬಗ್ಗೆ ಭವೇಶ್ ನನ್ನ ಬಳಿ ಹೇಳಿಕೊಂಡಿದ್ದನು. ಕಂಪೆನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಭವೇಶ್ ತಂದೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭವೇಶ್ ಒಂದು ವರ್ಷದ ಹಿಂದೆ ಉದ್ಯೋಗಕ್ಕಾಗಿ ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ್ದರು.


ಸಂಬಂಧಿತ ಟ್ಯಾಗ್ಗಳು

software engineer company ಆತ್ಮಹತ್ಯೆ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ