ಬಸ್ ಪಲ್ಟಿ 20ಕ್ಕೂ ಹೆಚ್ಚು ಜನರಿಗೆ ಗಾಯ

Bus Palty: more than 20 people injured

15-06-2018

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಗುಡ್ಡೆಹಳ್ಳ ಸಮೀಪ ಕೆ.ಎಸ್.ಆರ್.ಟಿ.ಸಿ ಸ್ಲೀಪರ್ ಬಸ್ ಪಲ್ಟಿಯಾಗಿದ್ದ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆ.ಎಸ್.ಆರ್.ಟಿ.ಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಕೊಪ್ಪದ ಎನ್.ಅರ್.ಪುರ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಎನ್.ಅರ್.ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

KSRTC chikkamagaluru ಅಸ್ಪತ್ರೆ ಚಾಲಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ