ಮಹಾರಾಷ್ಟ್ರ ಮುಖ್ಯಮಂತ್ರಿ ಮೈಸೂರಿಗೆ ಭೇಟಿ !

Kannada News

26-05-2017

ಮೈಸೂರು:- ನಿನ್ನೆಯಷ್ಟೇ ಹೆಲಿಕಾಪ್ಟರ್ ದುರಂತದಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಇಂದು ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದೇವೇಂದ್ರ ಫಡ್ನವಿಸ್, ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿನಿಡಿದ್ದಾರೆ. ನಂತರ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 75ನೇ ಹುಟ್ಟು ಹಬ್ಬದ ಅಂಗವಾಗಿ ಆಯೋಜಿಸಿರುವ ವಜ್ರೋತ್ಸವ ಸಮಾರಂಭದಲ್ಲಿ ಅವರು ಪಾಲ್ಗೊಂಡರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ