ನಿವೃತ್ತ ಐಪಿಎಸ್ ಅಧಿಕಾರಿ ಮನೆಯಲ್ಲೇ ಕಳ್ಳತನ

Robbery at retired IPS officers home

15-06-2018

ಬೆಂಗಳೂರು: ಹೆಚ್‍ಎಸ್‍ಆರ್ ಲೇಔಟ್‍ನ ನಿವೃತ್ತ ಐಪಿಎಸ್ ಅಧಿಕಾರಿ ಎಂ.ವಿ ಮೂರ್ತಿ ಅವರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ಹೆಚ್‍ಎಸ್‍ಆರ್ ಲೇಔಟ್‍ನ 4ನೇ ಹಂತದ ಮನೆಯನ್ನು ಎಂ.ವಿ ಮೂರ್ತಿ ಅವರು ಬೇರೆಯವರಿಗೆ ಬಾಡಿಗೆಗೆ ನೀಡಿದ್ದರು. ಬಾಡಿಗೆಗಿದ್ದವರು ಕಳೆದ ಜೂನ್ 11ರಂದು ಮನೆ ಬಾಗಿಲಿಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಹೊರಗೆ ಹೋಗಿದ್ದರು.

ಈ ವೇಳೆ ಹೊಂಚು ಹಾಕಿದ ದುಷ್ಕರ್ಮಿಗಳು ಮನೆಯ ಹಿಂಬಾಗಿಲಿನ ಕಿಟಕಿಯ ಗ್ರಿಲ್ ಮುರಿದು ಒಳ ನುಗ್ಗಿ ಚಿನ್ನಾಭರಣ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚಿ ಸೋಫಾವನ್ನೂ ಕೂಡ ಕಳವು ಮಾಡಿ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿರುವ ಹೆಚ್‍ಎಸ್‍ಆರ್ ಲೇಔಟ್ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

IPS Thief ದುಷ್ಕರ್ಮಿ ಮೌಲ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ