ಸಾರಿಗೆ ಇಲಾಖೆ ಕಚೇರಿಗೆ ಎಸ್ಎಫ್ಐ ಕಾರ್ಯಕರ್ತರ ಮುತ್ತಿಗೆ

SFI organisation protest for free bus pass for students

15-06-2018

ಬೆಂಗಳೂರು: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‍ಎಫ್‍ಐ)ಹಾಗೂ ಡಿವೈಎಫ್‍ಐ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭನಾ ನಿರತರು ಇಂದು ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಶಾಂತಿನಗರದ ಕೆಎಸ್‍ಆರ್ ಟಿಸಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ (ಕೆ.ಜಿ.ಯಿಂದ ಪಿಜಿ ವರೆಗೂ) ಉಚಿತ ಬಸ್ ಪಾಸ್ ಸೌಲಭ್ಯವನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‍ಎಫ್‍ಐ ಗುರುರಾಜ್ ದೇಸಾಯಿ, ಅಗತ್ಯವಿರುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ 100ಕಿ.ಮೀ ವರೆಗೆ ವಿಸ್ತರಿಸಬೇಕು. ಸರಕಾರಿ ಬಸ್ ಸಂಚಾರವಿಲ್ಲರುವ ಕಡೆಗಳಲ್ಲಿ ಖಾಸಗಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಅನೂಕೂಲ ಕಲ್ಪಿಸಬೇಕು ಎಂದರು. ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನೂ ಹಲವೆಡೆ ಬಸ್ ಸೌಲಭ್ಯವಿಲ್ಲ. ಅಂತಹ ಕಡೆ ಕೂಡಲೇ ಬಸ್ ಸೌಕರ್ಯ ಒದಗಿಸಬೇಕು. ಈಗ ಸೌಲಭ್ಯವಿರುವೆಡೆಗಳಲ್ಲಿ ವೇಳೆಗೆ ಸರಿಯಾಗಿ ಬಸ್ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಡಿವೈಎಫ್‍ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಜನಸಾಮಾನ್ಯರು ಹೆಚ್ಚಿನ ರೀತಿಯಲ್ಲಿ ಬಸ್ ಸೌಲಭ್ಯ ಬಳಸುವ ನಿಟ್ಟಿನಲ್ಲಿ, ಬಸ್ ಪ್ರಯಾಣ ದರ ಇಳಿಕೆ ಮಾಡಬೇಕು. ಖಾಸಗಿ ವಾಹನಗಳು ಜನಸಾಮಾನ್ಯರಿಂದ ಸಾಕಷ್ಟು ಸುಲಿಗೆ ಮಾಡುತ್ತಿದ್ದು, ಇದಕ್ಕೆ ಕೂಡಲೆ ಕಡಿವಾಣ ಹಾಕಬೇಕು ಹಾಗೂ ಖಾಸಗೀ ವಾಹನಗಳ ಮೇಲೆ ಸರಕಾರದ ನಿಯಂತ್ರಣವನ್ನು ಬಿಗಿಗೊಳಿಸಬೇಕು ಎಂದು ಆಗ್ರಹಿಸಿದರು.

ಮನವಿ: ರಾಜ್ಯದ ಎಲ್ಲ ಬಡ  ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿ ಎಸ್‍ಎಫ್‍ಐ ಕಾರ್ಯಕರ್ತರು ಕೆಎಸ್‍ಆರ್‍ಟಿಸಿ ನಿರ್ದೇಶಕರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

 

 


ಸಂಬಂಧಿತ ಟ್ಯಾಗ್ಗಳು

Bus Pass Free ನಿರ್ದೇಶಕ ಸರ್ಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ