ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ!

fight  Between congress and jds workers!

15-06-2018

ತುಮಕೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ತುಮಕೂರಲ್ಲಿ ನಡೆದಿದೆ. ಕುಣಿಗಲ್ ತಾಲ್ಲೂಕಿನ ಬಾಗೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ ಎನ್ನಲಾದ ನರೇಗಾ ಯೋಜನೆ ಅವ್ಯವಹಾರದ ಕುರಿತು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಆರೋಪ ಪ್ರತ್ಯಾರೋಪದ ನಡುವೆ ಈ ಘಟನೆ ನಡೆದಿದೆ. ಅವ್ಯವಹಾರದಲ್ಲಿ ಕಾಂಗ್ರೆಸ್ ನ ಜಿಲ್ಲಾ ಪಂಚಾಯತಿ ಸದಸ್ಯೆ ಪದ್ಮ ಪಾಪಣ್ಣ ಕೈವಾಡ ಇದೆ ಎಂದು ಜೆಡಿಎಸ್ ಕಾರ್ಯಕರ್ತರ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಕಾರ್ಯಕರ್ತರು ಅವ್ಯವಹಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಪ್ರತ್ಯಾರೋಪ ಮಾಡಿದ್ದಾರೆ. ಆರೋಪ ಪ್ರತ್ಯಾರೋಪಗಳು ಕೈ ಕೈ ಮಿಲಾಯಿಸುವಂತೆ ಮಾಡಿದ್ದವು. ಇದಾದ ಬಳಿಕ ಎರಡೂ ಪಕ್ಷದ ಕಾರ್ಯಕರ್ತರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

congress Jds ಪ್ರತ್ಯಾರೋಪ ಗ್ರಾಮ ಪಂಚಾಯತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ