ರೈತರ ಸಾಲಮನ್ನಾಗೆ ಸರ್ಕಾರ ಬದ್ಧ: ಸಿಎಂ

The government is committed to debt relief: CM kumaraswamy

15-06-2018

ಬೆಂಗಳೂರು: ರಾಜ್ಯದ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರೈತರ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದು, ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನಾಯಕರು ಈ ಬಗ್ಗೆ ಹೋರಾಟ ಮಾಡುವುದಾಗಿ ಹೇಳಿರುವ ಬೆನ್ನಲ್ಲೇ ಈ ಸ್ಪಷ್ಟನೆ ನೀಡಿರುವ ಅವರು, ರೈತರ ಸಾಲಮನ್ನಾ ವಿಚಾರದಲ್ಲಿ ಸರ್ಕಾರ ಕೊಟ್ಟ ಭರವಸೆಯಿಂದ ಹಿಂದೆ ಸರಿಯುವುದಿಲ್ಲ. ಈ ವಿಚಾರದಲ್ಲಿ ರೈತರು ಯಾವುದೇ ಗೊಂದಲ, ಆತಂಕಕ್ಕೆ ಒಳಗಾಗುವುದು ಬೇಡ, ಸ್ವಲ್ಪ ವಿಳಂಬವಾದರೂ, ಕೊಟ್ಟ ಮಾತಿನಂತೆ ಸಾಲಮನ್ನಾ ಮಾಡಿ, ರೈತರನ್ನು ಕಷ್ಟದಿಂದ ಪಾರುಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಬ್ಯಾಂಕಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಸಾಲಮನ್ನಾ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲಿಯೇ ಸರ್ಕಾರ ಬ್ಯಾಂಕ್ ಅಧಿಕಾರಿಗಳೊಂದಿಗೆ ರೈತರ ಬೆಳೆ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಮಾತುಕತೆ ನಡೆಸಿ, ನಿರ್ಧಾರಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ ಏಕಾಏಕಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಸಮ್ಮತಿ ಪಡದೇ ಸಾಲ ಮನ್ನಾ ಮಾಡಬೇಕಾಗಿದೆ.

ಸಾಲ ಮನ್ನಾದ ಪ್ರಯೋಜನ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ದೊರೆಯುವಂತಾಗಬೇಕು. ರೈತರು ಕೂಡ ಆರ್ಥಿಕವಾಗಿ ಸಬಲರಾಗಬೇಕು. ಮತ್ತೆ ಸಾಲದ ಸುಳಿಗೆ ಸಿಲುಕದಂತೆ ರೈತರ ಬದುಕನ್ನು ಹಸನು ಮಾಡಬೇಕು ಎಂಬ ಉದ್ದೇಶ ತಮ್ಮದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Yes
  • Mahesh uaddppa mantur
  • Mahesh mantur
Saala manna madidre Namma raajyada anekaneka kutumbagalu nemadiinda Jeevana maadikolluttare odara punyavella Kumaraswamy yavarige sallutte
  • Naveenkumar Kc Gowda
  • Dairy form (kaamadenu)