ನಾಡಿನಾದ್ಯಂತ ರಂಜಾನ್ ಸಂಭ್ರಮ

Ramadan celebration at karnataka

16-06-2018

ಹಾವೇರಿ: ಇಂದು ರಂಜಾನ್ ಹಬ್ಬ ಹಿನ್ನೆಲೆ, ಹಾವೇರಿ ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸಲ್ಮಾನ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಉಪವಾಸವಿದ್ದು ಹರಕೆ ಸಲ್ಲಿಸುವ ಮುಸಲ್ಮಾನ್ ಬಾಂಧವರು, ಇಂದು ಉಪವಾಸವನ್ನು ಅಂತ್ಯಗೊಳಿಸಿ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಇನ್ನು ಶಿರಸಿ ನಗರದ ಎಪಿಎಂಸಿ.ಮೈದಾನದಲ್ಲಿ ಸಾವಿರಾರು ಮುಸಲ್ಮಾನ ಬಾಂಧವರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಒಂದು ತಿಂಗಳ‌ ಉಪವಾಸದ ನಂತರ ರಂಜಾನ ಹಬ್ಬವಾದ ಇಂದು ವಿಶೇಷ ಪ್ರಾರ್ಥನೆಯ ಮೂಲಕ ಉಪವಾಸವನ್ನು ಅಂತ್ಯಗೊಳಿಸಿ, ಸಂತೋಷದಿಂದ ಪರಸ್ಪರ ಹಾರೈಸಿದರು.

ಚಿತ್ರದುರ್ಗದ ಚಂದ್ರವಳ್ಳಿ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವಿಶೇಷ ಪ್ರಾರ್ಥನೆಯಲ್ಲಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಕಾಂಗ್ರೆಸ್ ಮುಖಂಡ ಹನುಮಲಿ ಷಣ್ಮುಖಪ್ಪ ಭಾಗವಹಿಸಿದ್ದರು.


ಸಂಬಂಧಿತ ಟ್ಯಾಗ್ಗಳು

Ramzan Muslim ಮೈದಾನ ಪ್ರಾರ್ಥನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ