16 ವರ್ಷದ ಆ ಬಾಲಕನಿಗೆ ಅದೇನಾಗಿತ್ತೋ?

An 16 years old boy hang suicide

16-06-2018

ಬೆಳಗಾವಿ: ಶಾಲಾ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಚಿಕ್ಕೊಡಿ ತಾಲ್ಲೂಕಿನ ಚಮಕೇರಿ ಗ್ರಾಮದ ಮಠದ ಆವರಣದಲ್ಲಿ ಮೂರು ದಿನಗಳ ಹಿಂದೆ ಆತ್ಮಹತ್ಯೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದಾಶಿವ ಜಯವಂತ ಮಮದಾಪೂರ(16) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ. ಗ್ರಾಮದ ಸದಾಶಿವ ಮಠದ ಆವರಣದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Suicide student ನೇಣು ಪೊಲೀಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ