ಕಾಂಗ್ರೆಸ್ ವಿರುದ್ಧ ಸತೀಶ್ ಜಾರಕಿಹೊಳಿ ಬೆಂಬಲಿಗರ ಸಿಟ್ಟು!‌

Satish Jarkiholi supporters angry against Congress!

18-06-2018

ಬೆಳಗಾವಿ: ಕಾಂಗ್ರೆಸ್ ಪಕ್ಷದ ವಿರುದ್ಧ ಶಾಸಕ ಸತೀಶ ಜಾರಕಿಹೊಳಿ‌ ಬೆಂಬಲಿಗರು ಸಿಟ್ಟಾಗಿದ್ದಾರೆ. ಸಚಿವ ಸಂಪುಟದಲ್ಲಿ ಸತೀಶ ಜಾರಕಿಹೊಳಿ‌ ಅವರನ್ನು ಕೈ ಬಿಟ್ಟಿರುವುದಕ್ಕೆ ಆಕ್ರೋಶಗೊಂಡಿರುವ ಬೆಂಬಲಿಗರು, ನಾಳೆ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ. ಮಾನವ ಬಂಧುತ್ವ ವೇದಿಕೆ ಸಂಘಟನೆಯಿಂದ ಧರಣಿ ಮತ್ತು ಜನಾಗ್ರಹ ರಾಜ್ಯ ಸಮಾವೇಶವನ್ನು ನಗರದ ಫ್ರೀಡಂ ಪಾರ್ಕ್ ನಲ್ಲಿ ಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸತೀಶ ಜಾರಕಿಹೊಳಿ‌ ಅಭಿಮಾನಿಗಳು ಭಾಗಿಯಾಗಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ‌ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನಡೆಸುತ್ತಿರುವ ಈ ಪ್ರತಿಭಟನೆಯಲ್ಲಿ ಶಾಸಕ‌ ಸತೀಶ್ ಜಾರಕಿಹೊಳಿ‌ ಭಾಗಿಯಾಗುವುದು ಇನ್ನೂ ನಿಗದಿಯಾಗಿಲ್ಲ.  

ಜಾನಾಗ್ರಹ ಸಮಾವೇಶದಲ್ಲಿ ದೀನೇಶ ಅಮಿನಮಟ್ಟು, ಸಿದ್ದನಗೌಡ ಪಾಟೀಲ್ ಭಾಗಿಯಾಗುವ ಸಾಧ್ಯತೆಗಳಿವೆ. ಈಗಾಗಲೇ ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನೂ ಅಂಗೀಕಾರವಾಗಿಲ್ಲ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Satish Jarkiholi Protest ಸಮಾವೇಶ ಎಐಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ