ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

Horrific murder of a man at belagavi

18-06-2018

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿಯ ಗೋಕಾಕ ತಾಲ್ಲೂಕಿನ ಕೈತನಾಳ ಗ್ರಾಮದಲ್ಲಿ ಯಲ್ಲಪ್ಪ ಬಾಳನಾಯಿಕ(45) ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಕಳೆದ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ನಾಲ್ಕು ಮಂದಿಯ ಗ್ಯಾಂಗ್ ರಸ್ತೆಯಲ್ಲಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder weapons ಪರಾರಿ ಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ