ಸರ್ಕಾರಕ್ಕೆ ವಾಲ್ಮೀಕಿ ಸಮುದಾಯದ ಎಚ್ಚರಿಕೆ!

Valmiki community warning to government!

18-06-2018

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಸಮುದಾಯದವರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ವಾಲ್ಮೀಕಿ ಸಮುದಾಯವನ್ನ ಚುನಾವಣಾ ಸಂದರ್ಭಗಳಲ್ಲಿ ಮತ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಆದರೆ, ಸಚಿವ ಸ್ಥಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಇಂದಿನವರೆಗೂ ಯಾವ ಸರ್ಕಾರದಿಂದಲೂ ನಮ್ಮ ಸಮುದಾಯಕ್ಕೆ ನ್ಯಾಯಬದ್ಧವಾದ ಸ್ಥಾನಮಾನ ನೀಡಲಾಗಿಲ್ಲ ಎಂದು ಸಮುದಾಯದ ಮುಖಂಡರು ದೂರಿದ್ದಾರೆ. ಇದೇ ಸಂದರ್ಭ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ. ವಾಲ್ಮೀಕಿ ಸಮುದಾಯವನ್ನು ಶೋಷಣೆ ಮಾಡಲಾಗುತ್ತಿದೆ. ತಮ್ಮ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ‌ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಧರಣಿಗೆ ವಾಲ್ಮೀಕಿ ಸಮುದಾಯದ, ಬ್ರಹ್ಮಾನಂದ ಸ್ವಾಮೀಜಿ ಹಾಗೂ ಆತ್ಮಾನಂದ ಸ್ವಾಮೀಜಿ ಸಾಥ್ ನೀಡಿದರು. ಕನಿಷ್ಟ 4 ಸಚಿವ ಸ್ಥಾನ ಕೊಡಬೇಕೆಂದು ಪ್ರತಿಭಟನೆಯಲ್ಲಿ ಬೇಡಿಕೆ ಇಟ್ಟಿದ್ದು, ಪರೋಕ್ಷವಾಗಿ ವಿ.ಎಸ್.ಉಗ್ರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.


ಸಂಬಂಧಿತ ಟ್ಯಾಗ್ಗಳು

Valmiki protest ಪ್ರತಿಭಟನೆ ಸಚಿವ ಸ್ಥಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ