ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ!

Congress worker assaulted at binnypet bangalore

18-06-2018

ಬೆಂಗಳೂರು: ಮಾಗಡಿ ರಸ್ತೆಯ ಬಿನ್ನಿಪೇಟೆ ವಾರ್ಡ್ 121ರ ಉಪಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಮಧ್ಯರಾತ್ರಿ ಮತದಾರರಿಗೆ ಹಣ ಹಂಚಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ ಸುರೇಶ್‍ ಕುಮಾರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜೆಡಿಎಸ್ ಕಾರ್ಯಕರ್ತರು ಸುರೇಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

election congress ಸ್ಥಳೀಯ ಜೆಡಿಎಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ