ಹೊಗೆನೆಕಲ್ ಫಾಲ್ಸ್ ವೀಕ್ಷಣೆಗೆ ಬ್ರೇಕ್!

The Tamil Nadu Government has restricted visitors to the Hogenakkal falls!

18-06-2018

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಯುತ್ತಿರುವುದರಿಂದ ತಮಿಳುನಾಡಿನ ಹೊಗೆನೆಕಲ್ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ವೀಕ್ಷಣೆಗೆ ತಮಿಳುನಾಡು ಸರ್ಕಾರ ನಿರ್ಬಂಧ ವಿಧಿಸಿದೆ.

ಕಬಿನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಹೊಗೆನೆಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೊಗೆನಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾಯದ ಮಟ್ಟದಲ್ಲಿ ಕಾವೇರಿ ನೀರು ಹರಿಯುತ್ತಿರುವುದರಿಂದ ಮುಂಜಾಗ್ರತೆಯ ಕ್ರಮವಾಗಿ ತಮಿಳುನಾಡಿನ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ. ಇಲ್ಲಿಗೆ ರಾಜ್ಯದ ಪ್ರವಾಸಿಗರೇ ಹೆಚ್ಚಾಗಿ ಹೋಗುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ.

ಇನ್ನು ಕಳೆದ ಒಂದು ವಾರದಿಂದ ಸುರಿದ ಮಳೆಗೆ ಮಲೆನಾಡಿನ ನದಿಗಳು ಮೈದುಂಬಿಹರಿಯುತ್ತಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಸಹ ತುಂಬಿ ಹರಿಯುತ್ತಿದೆ. ರಾಜಾ, ರೋರರ್, ರಾಕೆಟ್, ರಾಣಿ ಧುಮ್ಮಿಕ್ಕುತ್ತಿವೆ. ಶರಾವತಿ ನದಿ ಜಲಾನಯನ ಪ್ರದೇಶಗಳಾದ ಹೊಸನಗರ, ಸಾಗರ ತಾಲೂಕುಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಆಗುತ್ತಿರುವುದು ಜಲಪಾತ ಕಳೆಕಟ್ಟಲು ಕಾರಣವಾಗಿದೆ.


ಸಂಬಂಧಿತ ಟ್ಯಾಗ್ಗಳು

Hogenakkal Falls Tamilnadu ಜಿಲ್ಲಾಡಳಿತ ಪ್ರವಾಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ