ಸಿದ್ದರಾಮಯ್ಯ ವಿರುದ್ಧ ಬೀದರ್ ರೈತರ ಆಕ್ರೋಶ

Farmers protest in front of the Bidar district collector

18-06-2018

ಬೀದರ್: ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಬೀದರ್ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ 15 ದಿನಗಳ ಕಾಲಾವಕಾಶ ಕೇಳಿತ್ತು. ಗಡವು ಮುಗಿದಿದ್ದರೂ ಸಾಲಮನ್ನಾ ಮಾಡಿಲ್ಲ. ಬಿಎಸ್ಎಸ್ ಕೆ ಸಕ್ಕರೆ ಕಾರ್ಖಾನೆಗೆ ನೂರು ಕೋಟಿ ನೀಡುತ್ತೇನೆ ಎಂದು ಕುಮಾರಸ್ವಾಮಿ ನೀಡಿರುವ ವಾಗ್ಧಾನ ನೇರವೇರಿಸಬೇಕು, ಅಲ್ಲದೇ ಸಕ್ಕರೆ ಕಾರ್ಖಾನೆಯಲ್ಲಿ ಆರು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ರೈತರ ಬಾಕಿ ಹಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

‘ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಾಲಮನ್ನಾ ವಿಷಯದಲ್ಲಿ ಅಡ್ಡಗಾಲ ಹಾಕುತಿದ್ದಾರೆ. ಈಗಾಗಲೇ‌ ಜನರು ಸಿದ್ದರಾಮಯ್ಯನವರಿಗೆ ತಕ್ಕ ಪಾಠ ಕಲಿಸಿದ್ದಾರೆ, ನಿಮಗೆ ರೈತರ‌ ಶಾಪ ತಟ್ಟದೆ ಬಿಡುವುದಿಲ್ಲ, ಒಂದು ವೇಳೆ ಸರ್ಕಾರ ಬೇಗನೆ ರೈತರ ಸಾಲಮನ್ನಾ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ’ ರೈತ ಮುಖಂಡ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

District Collector Farmers ಹೋರಾಟ ಕಾರ್ಖಾನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ