ಸಾಲಮನ್ನಾ ವಿಚಾರದಲ್ಲಿ ಕಾಂಗ್ರೆಸ್ ಹಸ್ತಕ್ಷೇಪ ಇಲ್ಲ: ದೇಶಪಾಂಡೆ

revenue minister r.v deshpande reaction on farmers loan waiver

18-06-2018

ಕೊಡಗು: ಭಾರೀ ಮಳೆಯಿಂದ ಕೊಡಗಿನಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಭೇಟಿ ನೀಡಿದ್ದಾರೆ. ಮಡಿಕೇರಿಯ ಪೆರುಂಬಾಡಿ-ವಿರಾಜಪೇಟೆ ರಸ್ತೆ ಪರಿಶೀಲನೆ ನಡೆಸಿದ ಸಚಿವರು, ಮಣ್ಣು ಕುಸಿತದಿಂದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಶೀಘ್ರದಲ್ಲೇ ರಸ್ತೆಗೆ ಬಿದ್ದಿರುವ ಮಣ್ಣು, ಮರಗಳನ್ನು ತೆರವುಗೊಳಿಸಬೇಕಿದೆ. ಈಗಾಗಲೇ 10ಕೋಟಿ ಅನುದಾನ ನೀಡಲಾಗಿದೆ. ಹಣದ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದರು. ಅಧಿಕಾರಿಗಳಿಗೂ ಸಹ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಇನ್ನು ರೈತರ ಸಾಲಮನ್ನಾ ವಿಚಾರವಾಗಿ ಮಾತನಾಡಿದ ಅವರು, 'ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ. ಅದರಲ್ಲಿ ಯಾವುದೇ ಅನುಮಾನ ಬೇಡ' ಎಂದು ಹೇಳಿದರು. ಹಿಂದಿನ ಸರ್ಕಾರ ಕೂಡಾ ರೈತರ ಸಾಲಮನ್ನಾ ಮಾಡಿತ್ತು. ಈ ಸರ್ಕಾರವೂ ಮಾಡುತ್ತದೆ. ಕಾಂಗ್ರೆಸ್ ಪಕ್ಷ ಸಾಲಮನ್ನಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ ಎಂಬುದನ್ನೂ ತಿಳಿಸಿದ್ದಾರೆ. ಕುಮಾರಸ್ವಾಮಿ ನೇತೃತ್ವದ ಸರ್ಕಾರ 5ವರ್ಷ ಪೂರೈಸುತ್ತದೆ ಎಲ್ಲರೂ ಸಹಕಾರ ಕೊಡಿ ಎಂದು ಮನವಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

R.V.Deshpande loan waiver ಹಸ್ತಕ್ಷೇಪ ಕೊರತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ